Village Accountant Recruitment: ನಮಸ್ಕಾರ ಸ್ನೇಹಿತರೆ, ಈ ಲೇಖನದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಮತ್ತು 1000 ಗ್ರಾಮ ಲೆಕ್ಕಾಧಿಕಾರಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶವಿದೆ ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೀರಾ.
ಕಂದಾಯ ಇಲಾಖೆ ನೇಮಕಾತಿ:
ಕಂದಾಯ ಇಲಾಖೆಯು ಹೊರಡುತ್ತಿರುವ ನೇಮಕಾತಿಯಾದಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳನ್ನು ಹೊಂದಿರಬೇಕು ಮತ್ತು ಹುದ್ದೆಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ.
ಹುದ್ದೆಗಳ ವಿವರ:
ನೇಮಕಾತಿ ಇಲಾಖೆ | ಕಂದಾಯ ಇಲಾಖೆ |
ಹುದ್ದೆಗಳ ಹೆಸರು | ಗ್ರಾಮ ಲೆಕ್ಕಾಧಿಕಾರಿ |
ಖಾಲಿ ಹುದ್ದೆಗಳು | 1,000 ಖಾಲಿ ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ | ದ್ವಿತೀಯ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. |
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿ ಮತ್ತು 2A,2B,3A,3B ಕೆಟಗರಿ ಅಭ್ಯರ್ಥಿಗಳಿಗೆ 38 ವರ್ಷಗಳ ಗರಿಷ್ಠ ವಯೋಮಿತಿಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
- 2A,2B,3A,3B ಅಭ್ಯರ್ಥಿಗಳಿಗೆ – ₹500
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ₹750
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹300
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನವಿಟ್ಟು ಓದಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ | 19/09/2024 |
ಅರ್ಜಿ ಸಲ್ಲಿಕೆ ಮುಕ್ತಾಯ | 29/09/2024 |
ಪ್ರಮುಖ ಲಿಂಕುಗಳು:
New Notification 01 | Check Now |
New Notification 02 | Check Now |
Old Notification | Check Now |
Application Link | Apply Now |
ಮೇಲೆ ನೀಡಿರುವ ಲಿಂಕ್ಗಳನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಾಗಿ ಅಧಿಸೂಚನೆಯನ್ನು ಗಮನದಿಂದ ಓದಿಕೊಳ್ಳಿ.