Anganavadi Recruitment: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರ ಈ ಕೆಳಗೆ ನೀಡಲಾಗಿದೆ.
(Anganavadi Recruitment) ಅಂಗನವಾಡಿ ನೇಮಕಾತಿ:
ಕರ್ನಾಟಕ ರಾಜ್ಯದಲ್ಲಿರುವ ಕೆಲವು ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆಗಳು ಮುಕ್ತಾಯಗೊಂಡಿವೆ ಎಂದು ಹೇಳಬಹುದಾಗಿದೆ. ಆದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು ಬಾಕಿ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಆರಂಭವಾಗಿದೆ. ಸುಮಾರು 1,300ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಆರಂಭವಾಗಿತ್ತು. ಇದರಲ್ಲಿ ಕೆಲವು ಹುದ್ದೆಗಳಿಗೆ ಕೊನೆ ದಿನಾಂಕವು ಮುಕ್ತಾಯಗೊಂಡಿರುತ್ತದೆ ಇನ್ನು ಕೆಲವು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾಗಿರುವ ಅರ್ಹತೆಗಳನ್ನು ಈ ಕೆಳಗೆ ತಿಳಿಸಲಾಗಿರುತ್ತದೆ. ಕೆಳಗೆ ನೀಡಿರುವ ಅರ್ಹತೆಗಳಿಗೆ ಅನುಸಾರವಾಗಿ ನೀವು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಮೀರಿರಬಾರದು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯು 10ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ಡಿಪ್ಲೋಮಾ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ವಿಧಿಸಲಾಗಿರುವುದಿಲ್ಲ.
ಯಾವ ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳಿವೆ:
ಸಾಕಷ್ಟು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶಗಳು ಮುಕ್ತಾಯಗೊಂಡಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಮಾತ್ರ ಅರ್ಜಿಗಳು ಆರಂಭ ಆಗಿ ಕೊನೆಗೊಂಡಿಲ್ಲ. ಅವುಗಳಲ್ಲಿ ನೋಡುವುದಾದರೆ ಯಾದಗಿರಿ, ದಾವಣಗೆರೆ, ವಿಜಯನಗರ, ಗದಗ ಜಿಲ್ಲೆಯಲ್ಲಿ ಇನ್ನೂ ಅರ್ಜಿಗಳು ತೆರೆದಿರುತ್ತವೆ ಎಂದು ತಿಳಿದುಬಂದಿರುತ್ತದೆ.
ಗದಗ ಜಿಲ್ಲೆ ಖಾಲಿ ಹುದ್ದೆಗಳ ವಿವರ:
- ನೇಮಕಾತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
- ಖಾಲಿ ಹುದ್ದೆಗಳು: 196 ಖಾಲಿ ಹುದ್ದೆಗಳು
- ಉದ್ಯೋಗ ಸ್ಥಳ: ಗದಗ ಜಿಲ್ಲೆಯಲ್ಲಿ
- ಅರ್ಜಿ ಹಾಕಲು ಕೊನೆಯ ದಿನಾಂಕ: 19/09/2024
ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು:
- ಖಾಲಿ ಹುದ್ದೆಗಳು: 297 ಖಾಲಿ ಹುದ್ದೆಗಳು
- ಉದ್ಯೋಗ ಸ್ಥಳ: ವಿಜಯನಗರ ಜಿಲ್ಲೆಯಲ್ಲಿ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/09/2024
ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು:
- ಖಾಲಿ ಹುದ್ದೆಗಳು: 470 ಖಾಲಿ ಹುದ್ದೆಗಳು
- ಉದ್ಯೋಗ ಸ್ಥಳ: ಯಾದಗಿರಿ ಜಿಲ್ಲೆಯಲ್ಲಿ
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13/09/2024
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು:
- ಖಾಲಿ ಹುದ್ದೆಗಳು : 237 ಖಾಲಿ ಹುದ್ದೆಗಳು
- ಉದ್ಯೋಗ ಸ್ಥಳ : ದಾವಣಗೆರೆ ಜಿಲ್ಲೆಯಲ್ಲಿ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2024
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- 10ನೇ ತರಗತಿ ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ:
ಕರ್ನಾಟಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆಯ ಹುದ್ದೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನಿಮಗೆ ಅರ್ಜಿ ಸಲ್ಲಿಸಲು ಏನಾದರೂ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.