Free Gas Cylinder: ನಮಸ್ಕಾರ ಎಲ್ಲರಿಗೂ, ದೀಪಾವಳಿ ಹಬ್ಬದ ಪ್ರಯುಕ್ತ ಕೆಲವು ರಾಜ್ಯಗಳಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತಿದ್ದು, ನೀವು ಕೂಡ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ, ಸರ್ಕಾರ ತಂದಿರುವಂತಹ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.
ಅದಲ್ಲದೆ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಬ್ಸಿಡಿ ದರದಲ್ಲಿ ನೀವು ಪ್ರತಿ ತಿಂಗಳು 500 ರೂಪಾಯಿಯಂತೆ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗಿನ ನೀಡಲಾಗಿದೆ ನೋಡಿ.
ಸ್ನೇಹಿತರೆ, ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಹಾಗೂ ಇನ್ನು ಮುಂದೆ ಅರ್ಜಿ ಸಲ್ಲಿಸುವ ಎಲ್ಲಾ ಮಹಿಳೆಯರಿಗೆ ಹಬ್ಬದ ಪ್ರಯುಕ್ತ ಉತ್ತರಪ್ರದೇಶ ರಾಜ್ಯದಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯು ಮಹಿಳೆಯರಿಗೆ ಸಾಕಷ್ಟು ಸಂತಸವನ್ನು ತಂದಿದೆ ಎಂದು ಹೇಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರಿಗೆ ಸಬ್ಸಿಡಿಯ ರೂಪದಲ್ಲಿ 300 ರೂಪಾಯಿ ಹಣವನ್ನು ಪ್ರತಿಯೊಬ್ಬರೂ ಕೂಡ ಈ ಯೋಜನೆಯ ವತಿಯಿಂದ ಪಡೆದುಕೊಳ್ಳುತ್ತಿದ್ದಾರೆ.
ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಪಡೆಯಬೇಕೆಂದು ಬಯಸಿದರೆ, ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳು ಮತ್ತು ದಾಖಲೆಗಳನ್ನು ಈ ಕೆಳಗೆ ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು 18 ವರ್ಷ ಮೇಲ್ಪಟ್ಟು 59 ವರ್ಷ ಮೀರಿರಬಾರದು.
ಈ ಯೋಜನೆಗೆ ಅರ್ಜಿ ಸಲ್ಲಿಸಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌ ಪಡೆಯಲು ಬಯಸುವ ಮಹಿಳೆಯು ಈ ಹಿಂದೆ LPG ಕನೆಕ್ಷನ್ ಅನ್ನು ಪಡೆದಿರಬಾರದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದವರು ಓಬಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಲ್ಪಸಂಖ್ಯಾತರ ಮತ್ತು ಎಪಿಎಲ್ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಭಾರತ ದೇಶದ ನಿವಾಸಿಗಳಿಗೆ ಅದರಲ್ಲೂ ಮಹಿಳೆಯರಿಗೆ ಮಾತ್ರ ಅವಕಾಶ.
ಸದ್ಯಕ್ಕೆ LPG ಗ್ಯಾಸ್ ಸಿಲೆಂಡರ್ 14 ಕೆಜಿಯ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ 805. 50 ರೂಪಾಯಿಗೆ ದೊರಕುತ್ತದೆ. ಈ ಯೋಜನೆಯ ಅಡಿಯಲ್ಲಿ ನೀಡುವಂತಹ 300 ರೂಪಾಯಿ ಸಬ್ಸಿಡಿ ಹಣವನ್ನು ತೆಗೆದರೆ ಕೇವಲ 505 ರೂಪಾಯಿಗಳಿಗೆ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಂಡ ಹಾಗೆ ಆಗುತ್ತದೆ.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ಕೆವೈಸಿ ಸಂಬಂಧಿಸಿದ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಅನ್ನು ಪಡೆದುಕೊಳ್ಳಬೇಕೆಂದು ಬಯಸಿದರೆ, ಈ ಕೆಳಗೆ ನೀಡಿರುವಂತಹ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದು.
Application Link | Apply Now |
ಮೇಲೆ ನೀಡಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಅಧಿಕೃತ ಜಾಲತಾಣವನ್ನು ಬಳಸಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಮಗೆ ತಿಳಿಯದಿದ್ದಲ್ಲಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅಥವಾ ನಿಮ್ಮ ಗ್ಯಾಸ್ ಏಜೆನ್ಸಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.