Gruhalakshmi Big Update: ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಜನತೆಗೆ ಅನಂತ ಅನಂತ ನಮಸ್ಕಾರಗಳು. ಈ ಲೇಖನದ ಮೂಲಕ ನಿಮಗೆ ತಿಳಿಸ ಬಯಸುವ ವಿಷಯವೇನೆಂದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ರವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳ ಹಣ ಪೆಂಡಿಂಗ್ ಇರುವುದಾಗಿ ಅದರ ಬಿಡುಗಡೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
ನಿಮಗೆಲ್ಲ ತಿಳಿದಿರುವ ಹಾಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಹಿಡಿದು ಸುಮಾರು 10 ರಿಂದ 11 ತಿಂಗಳುಗಳ ಕಾಲ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಜಮಾ ಆಗಿದೆ. ಸರ್ಕಾರವು ನೀಡಿರುವ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯು ಪ್ರತಿ ಮನೆಯ ಯಜಮಾನಿಯ ಖಾತೆಗೆ ₹2,000 ಹಣವನ್ನು ಪ್ರತಿ ತಿಂಗಳು ಕೂಡ ಜಮಾ ಮಾಡುವ ಉದ್ದೇಶವನ್ನು ಹೊಂದಿತ್ತು.
ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಬಿಡುಗಡೆ ಯಾವಾಗ?
ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರವರು ಮಾಧ್ಯಮಗಳ ಮುಂದೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇರುವ ವಿಚಾರದ ಬಗ್ಗೆ ಕೇಳಿರುವ ಪ್ರಶ್ನೆಗೆ ಸಂಬಂಧಿಸಿದ ಹಾಗೆ, ಸರಿಯಾದ ರೀತಿಯಲ್ಲಿ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ.
ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವವರೆಗೂ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕಾಗಿ ನಿಲ್ಲಿಸಲಾಗುವುದಿಲ್ಲ ಮತ್ತು ಇದರ ಬಗ್ಗೆ ನಿಮಗೆ ಯಾವ ಅನುಮಾನವೂ ಕೂಡ ಬೇಡ. ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಎರಡು ತಿಂಗಳಿನಿಂದ ಜಮಾ ಆಗಿಲ್ಲ ಆದರೆ ಒಂದೇ ಬಾರಿಗೆ ಒಟ್ಟಿಗೆ ಪಾವತಿ ಮಾಡಲಾಗುವುದು ಎಂದು ಕೂಡ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ.
ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯು ಯಾವುದೇ ಕಾರಣಕ್ಕೆ ನಿಲ್ಲಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎರಡು ಕಂತ್ತಿನ ಹಣ ಬಾಕಿ ಇದ್ದವರಿಗೆ ₹4,000 ಹಣವನ್ನು ಜಮಾ ಮಾಡಲಾಗುವುದು ಹಾಗೂ ಮೂರು ಕಂತಿನ ಹಣ ಬಾಕಿ ಇದ್ದವರಿಗೆ ₹6,000 ಹಣವನ್ನು ಸೆಪ್ಟೆಂಬರ್ 30ನೇ ತಾರೀಖಿನ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ. ಫಲಾನುಭವಿಗಳು ಕಾಯಬೇಕಿದೆ.
ಓದುಗರ ಗಮನಕ್ಕೆ: ಮೇಲೆ ನೀಡಿರುವ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ಹಲವಾರು ಕಡೆ ಕೇಳಿ ಬರುತ್ತಿದ್ದು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎಂಬ ನಂಬಿಕೆಗಳನ್ನು ಉಂಟು ಮಾಡಿರುತ್ತದೆ. ಹಾಗಾಗಿ ಇನ್ನು ಸಪ್ಟೆಂಬರ್ 30ನೇ ತಾರೀಖಿನ ಒಳಗಾಗಿ ಹಣ ಜಮಾ ಆಗಬಹುದು ಎಂಬ ಮಾಹಿತಿಗಳು ಲಭಿಸಿವೆ.