Gruhalakshmi Scheme: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಇಂದೇ ಹೇಳಬಹುದು. ಯಾಕೆಂದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ 12ನೇ ಮತ್ತು 13ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂದು ತಿಳಿಸಿಕೊಟ್ಟಿದ್ದಾರೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿರುತ್ತದೆ ನೋಡಿ.
ಕರ್ನಾಟಕ ಸರ್ಕಾರವು ಅಂದರೆ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಸವಲತ್ತನ್ನು ಹಲವಾರು ಮಹಿಳೆಯರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು. ಇದುವರೆಗೂ ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.
ಗೃಹಲಕ್ಷ್ಮಿ 12ನೇ ಮತ್ತು 13ನೇ ಕಂತಿನ ಹಣ:
ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ ಸಾವಿರ ರೂಪಾಯಿ ಹಣವನ್ನು ಪ್ರತಿ ತಿಂಗಳು ಕೂಡ ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ. ಇದುವರೆಗೆ ಮಹಿಳೆಯರು 11 ಕಂತಿನ ಹಣವನ್ನು ಪಡೆದುಕೊಂಡಿರುತ್ತಾರೆ. ಹಾಗೂ ಅರ್ಹರಿಗೆ ಮಾತ್ರ ಹಣ ಸೇರಿರುತ್ತದೆ. ನಂತರ 12 ಮತ್ತು 13ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಇನ್ನು ಸಂದಾಯ ಮಾಡಲಾಗಿಲ್ಲ.
ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗಿಲ್ಲ ಎಂದು ಇಲಾಖೆಯ ತಿಳಿಸಿರುತ್ತದೆ ಸದ್ಯಕ್ಕೆ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗಿದ್ದು ನಾಳೆ ಅಥವಾ ಇನ್ನೆರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಖಾತೆಗೆ ಜಮಾ ಆಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಮಾತನಾಡಿರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್ ಅವರು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 11ನೇ ಕಂತಿನ ಹಣ ಬಿಡುಗಡೆ ಆಗಿದ್ದು ನಿಮಗೆಲ್ಲ ಗೊತ್ತೇ ಇದೆ. ಇನ್ನು ನಾಲ್ಕೈದು ದಿನಗಳಲ್ಲಿ 12 ಮತ್ತು 13ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ತಿಳಿಸಿರುತ್ತಾರೆ.
ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಖಾತೆಗಳು ಡಿಲೀಟ್ ಆಗಿದೆ ಎನ್ನುವ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಪ್ರತಿಕ್ರಿಯಿಸಿರುತ್ತಾರೆ. ಇದುವರೆಗೆ ನಾವು ಯಾವುದೇ ಖಾತೆಗಳನ್ನು ಡಿಲೀಟ್ ಮಾಡಿಲ್ಲ. ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುವವರು ಇದ್ದಾರೆ ಅಂತವರ ಹಾಗೂ ಅವರು ಅಪ್ಲೋಡ್ ಮಾಡಿರುವ ಅರ್ಜಿಗಳನ್ನು ಡಿಲೀಟ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.