Labour Card Scholarship: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಮತ್ತು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಎಂಬುವುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕ ಅಂದರೆ ಅರ್ಹರಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದೆ ಎಂದು ಹೇಳಿದರೆ ತಪ್ಪಾಗಲಾರದು. ಕಾರ್ಮಿಕರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಕಾರ್ಮಿಕ ಇಲಾಖೆಯ ವತಿಯಿಂದ ಶೈಕ್ಷಣಿಕ ಧನಸಹಾಯವನ್ನು ಕಾರ್ಮಿಕ ಮಕ್ಕಳಿಗೆ ಕಾರ್ಮಿಕ ಇಲಾಖೆಯ ನೀಡಲಾಗುತ್ತಿದ್ದು ಅರ್ಹರರವ ನೋಂದಾಯಿತ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು.
2024-25 ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕೆ ಅಂತ ಮೀಸಲಿಟ್ಟಿರುವಂತಹ ಅನುಗುಣ ಶೈಕ್ಷಣಿಕ ಸಹಾಯಧನಕ್ಕಾಗಿ ಅಂದರೆ ಲೇಬರ್ ಕಾರ್ಡ್ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲಾಗುವುದು ಎಂದು ಕಾರ್ಮಿಕ ಇಲಾಖೆ ತಿಳಿಸಿರುತ್ತದೆ. ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಹಾಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಹತೆ ಇರುವಂತಹ ನೋಂದಾಯಿತ ಕಾರ್ಮಿಕರ ಮಕ್ಕಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಲೇಬರ್ ಕಾರ್ಡ್ ಹೊಂದಿರುವಂತಹ ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕನ್ನು ಈ ಕೆಳಗಡೆ ನೀಡಲಾಗಿರುತ್ತದೆ. ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು ಸೂಕ್ತ ಎನಿಸುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2024
ಮೇಲೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಈ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರಿಗೆ ಭೇಟಿ ನೀಡುವ ಮೂಲಕ ಇನ್ನಷ್ಟು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.