PM Awas Yojana 2024: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವ ವಿಷಯವೇನೆಂದರೆ, ಉಚಿತ ಮನೆ ನಿರ್ಮಿಸಿಕೊಳ್ಳಲು ಅಥವಾ ಮನೆ ಇಲ್ಲದವರಿಗೆ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಿಗುವ ಆರ್ಥಿಕ ಸಹಾಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಲೇಖನವನ್ನು ಕೊನೆಯವರೆಗೂ ಓದಿ.
ಪ್ರಧಾನಮಂತ್ರಿ ಆವಾಸ್ ಯೋಜನೆ! (PM Awas Yojana 2024)
ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿರುವ ಈ ಯೋಜನೆ ಭಾರತ ದೇಶದಲ್ಲಿರುವಂತಹ ಹಿಂದುಳಿದ ವರ್ಗ ಹಾಗೂ ಬಡ ಕುಟುಂಬಗಳಿಗೆ ಹಾಗೂ ಇನ್ನಿತರ ಮನೆ ಇಲ್ಲದಂತಹ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುತ್ತದೆ. ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಕವಾಗುವ ಉದ್ದೇಶವನ್ನು ಈ ಯೋಜನೆಯ ಹೊಂದಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಮಧ್ಯಮ ವರ್ಗದವರು ಅಥವಾ ವಸತಿ ಇಲ್ಲದಿರುವಂತಹ ಜನರು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಾರ್ಷಿಕ ಆದಾಯ 2,50,000 ಕ್ಕಿಂತ ಕಡಿಮೆ ಇರಬೇಕು.
ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳಿಗೆ ವಿಧವೆ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ & ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುವುದು.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರಗಳು
- ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗಡೆ ನೀಡಿರುವಂತಹ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Application Link | Apply Now |
ಮೇಲೆ ನೀಡಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ನಿಮಗೆ ತಿಳಿಯದಿದ್ದಲ್ಲಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೆಂಟರ್ ಗೆ ಅಗತ್ಯ ಬೀಳುವ ದಾಖಲೆಗಳೊಂದಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.