PM Awas: ನಮಸ್ಕಾರ ಎಲ್ಲರಿಗೂ, ಕರ್ನಾಟಕದ ಜನತೆಗೆ ಅನಂತ ಅನಂತ ನಮಸ್ಕಾರಗಳು, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಸ್ವಂತ ಮನೆ ಕಟ್ಟಿಸಿಕೊಳ್ಳಬೇಕು ಅಂತ ಅಂದುಕೊಂಡಿದ್ದೀರಾ ಹಾಗೂ ನೀವು ಮನೆ ಕಟ್ಟಿಸಿಕೊಳ್ಳಲು ಸರ್ಕಾರದ ವತಿಯಿಂದ ಆರ್ಥಿಕ ಸಹಾಯವನ್ನು ಪಡೆಯಬೇಕೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನೀವು ಉಚಿತ ಮನೆಯನ್ನು ಪಡೆಯಬಹುದಾಗಿರುತ್ತದೆ.
ಹೌದು ಸ್ನೇಹಿತರೆ, ಇದು ಒಂದು ಭರ್ಜರಿ ಗುಡ್ ನ್ಯೂಸ್ ಇಂದೇ ಹೇಳಬಹುದು ಈ ಯೋಜನೆಯ ಮೂಲಕ ನೀವು ಉಚಿತ ಮನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಮನೆ ಕಟ್ಟಿಕೊಳ್ಳಲು ಧನ ಸಹಾಯವನ್ನು ಈ ಯೋಜನೆಯ ಅಡಿಯಲ್ಲಿ ಮಾಡಲಾಗುತ್ತದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ ಅಂದಾಗ ಮಾತ್ರ ನಿಮಗೆ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಸಾಕಷ್ಟು ಜನರಿಗೆ ತಮ್ಮದೇ ಆದ ಒಂದು ಸ್ವಂತ ಮನೆಯನ್ನು ಕಟ್ಟಿಸಿ ಕೊಳ್ಳಬೇಕು ಎಂಬ ಬಹುದೊಡ್ಡ ಆಸೆ ಇದ್ದೇ ಇರುತ್ತದೆ. ಆದರೆ ತುಂಬಾ ಜನರು ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವರ ಆರ್ಥಿಕ ಪರಿಸ್ಥಿತಿಯು ಅವರು ತಮ್ಮ ಕನಸನ್ನು ಹಾಗೂ ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಸಹಕರಿಸುವುದಿಲ್ಲ. ನಿಮಗೆ ಒಂದು ಭರ್ಜರಿ ಗುಡ್ ನ್ಯೂಸ್ ಏನೆಂದು ಹೇಳುವುದಾದರೆ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಉಚಿತ ಮನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ಲೇಖನದಲ್ಲಿ ಇದಕ್ಕೆ ಬೇಕಾದ ಸಂಪೂರ್ಣವಾದ ವಿವರಗಳು ಇವೆ.
ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ, ಪ್ರಧಾನಮಂತ್ರಿಗಳಾದಂತಹ ನರೇಂದ್ರ ಮೋದಿಯವರು ಈ ಒಂದು ಪ್ರಧಾನಮಂತ್ರಿಯ ಆವಾಸ್ ಯೋಜನೆಯನ್ನು ಬಹು ವರ್ಷಗಳ ಹಿಂದೆಯೇ ಜಾರಿಗೆ ತಂದಿರುತ್ತಾರೆ. ಈ ಯೋಜನೆಯ ಅಡಿಯಲ್ಲಿ ಹಿಂದುಳಿದಿರುವಂತಹ ವರ್ಗದವರು ಹಾಗೂ ಬಡವರು ಮತ್ತು ವಾಸ ಮಾಡಲು ಮನೆ ಇಲ್ಲದಿರುವ ಜನರಿಗೆ ಮನೆಯನ್ನು ಕಟ್ಟಿಸಿ ಕೊಡುವ ಒಂದು ಒಳ್ಳೆಯ ಉದ್ದೇಶದಿಂದ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ಪ್ರಧಾನ ಮಂತ್ರಿಗಳು ತಂದಿರುತ್ತಾರೆ.
ಇದೇ ರೀತಿ ಸರ್ಕಾರದ ವತಿಯಿಂದ ಲಭ್ಯವಿರುವ ಯೋಜನೆಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಭ್ಯವಿರುವ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಅಂತ ನೀವು ಬಯಸುತ್ತೀರಾ. ಕರ್ನಾಟಕ ರಾಜ್ಯದಲ್ಲಿ ನಡೆಯುವ ಹಲವಾರು ವಿಷಯಗಳ ಬಗ್ಗೆ ನೀವು ನಮ್ಮ ಜಾಲತಾಣದಲ್ಲಿ ಓದಬಹುದು. ಹಾಗೂ ನಮ್ಮ ಜಾಲತಾಣದ ಮೂಲಕ ನೀವು ಸ್ಕಾಲರ್ಶಿಪ್ ಮತ್ತು ಕರ್ನಾಟಕ ಸರ್ಕಾರದಲ್ಲಿ ಪ್ರಚಲಿತವಾಗಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ನಮ್ಮ ಜಾಲತಾಣದಲ್ಲಿ ನೀವು ಪಡೆದುಕೊಳ್ಳಬಹುದಾಗಿರುತ್ತದೆ.
ಇದಷ್ಟೇ ಅಲ್ಲದೆ ನಮ್ಮ ಜಾಲತಾಣದಲ್ಲಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡಲಾಗುತ್ತದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರಿಂದ ಹಿಡಿದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವ ರೀತಿಯಾಗಿರುತ್ತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಹುದ್ದೆಗಳಿಗೆ ಬೇಕಾಗುವ ಸಂಪೂರ್ಣವಾದ ವಿವರಗಳನ್ನು ನೀವು ನಮ್ಮ ಜಾಲತಾಣದ ಮುಖಾಂತರ ಪಡೆಯಬಹುದಾಗಿರುತ್ತದೆ. ಆದ್ದರಿಂದ ನೀವು ನಮ್ಮ ಜಾಲತಾಣದ ಚಂದದಾರರಾಗುವ ಮೂಲಕ ಇದೇ ತರಹದ ಸುದ್ದಿಗಳನ್ನು ದಿನನಿತ್ಯ ಕೂಡ ಉಚಿತವಾಗಿ ಪಡೆಯಬಹುದಾಗಿರುತ್ತದೆ.
ಪ್ರಧಾನಮಂತ್ರಿ ಆವಾಸ (PM Awas) ಯೋಜನೆ 2.0:
ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಹಿಂದುಳಿದ ವರ್ಗದ ಜನರಿಗೆ ಮತ್ತು ಬಡವರಿಗೆ ಹಾಗೂ ರೈತ ಕುಟುಂಬಗಳಿಗೆ ಮತ್ತು ಮನೆ ಇಲ್ಲದಿರುವಂತಹ ಕೆಲವು ಕೂಲಿ ಕಾರ್ಮಿಕರಿಗೆ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಈ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಬಡವರು ಮತ್ತು ಮನೆ ಇಲ್ಲದಂತಹ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ ಮಾಡಿಕೊಡುವ ಒಂದು ಮುಖ್ಯವಾದ ಗುರಿಯನ್ನು ಹೊಂದಿರುತ್ತದೆ.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಹಿಂದುಳಿದ ವರ್ಗದವರು ಮತ್ತು ಬಡವರು ಹಾಗೂ ಮನೆ ಇಲ್ಲದಿರುವಂತಹ ಹಲವಾರು ಕೂಲಿಕಾರ್ಮಿಕರು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದವರು ಮತ್ತು ಅಲ್ಪಸಂಖ್ಯಾತರು ಹಾಗೂ ಆರ್ಥಿಕವಾಗಿ ಹಿಂದುಳಿದಿರುವಂತಹ ಜನರು ದಿನದಲಿತರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಹಾಗೂ ಉಚಿತ ಮನೆ ಕಟ್ಟಿಕೊಳ್ಳಲು ಈ ಯೋಜನೆ ಅಡಿಯಲ್ಲಿ ನೀವು ಸಹಾಯಧನವನ್ನು ಕೂಡ ಪಡೆಯಬಹುದಾಗಿರುತ್ತದೆ.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಸ್ತುತ ಭಾರತ ದೇಶದ ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾದ ನಂತರ ಈ ಯೋಜನೆಯನ್ನು ಜಾರಿಗೆ ತಂದಿರುತ್ತಾರೆ. ಹಾಗೂ ಈ ಯೋಜನೆಯ ಮೊದಲ ಹೆಸರು ರಾಜೀವ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಈ ಯೋಜನೆಗೆ “ಪ್ರಧಾನಮಂತ್ರಿ ಆವಾಸ್ ಯೋಜನೆ” ಎಂದು 2015 ರಲ್ಲಿ ಮರುನಾಮಕರಣ ಮಾಡಿರುತ್ತಾರೆ.
ಈ ಮೊದಲು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ 2015ರಲ್ಲಿ ಪ್ರಧಾನಮಂತ್ರಿಯ ಆವಾಸ್ ಯೋಜನೆಯಂದು ಈ ಯೋಜನೆಗೆ ಹೆಸರನ್ನು ಬದಲಾವಣೆ ಮಾಡುತ್ತಾರೆ. ಈ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಸಿಕೊಳ್ಳುವ ಒಂದು ಸುವರ್ಣ ಅವಕಾಶವನ್ನು ನೀಡಲಾಗುತ್ತದೆ. ಹಾಗೂ ಈ ಯೋಜನೆ ಅಡಿಯಲ್ಲಿ ಸುಮಾರು ಎರಡು ಕೋಟಿಗಿಂತಲೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು 2024-25 ನೇ ಸಾಲಿನ ಬಜೆಟ್ ಮಂಡನೆ ವೇಳೆ ನಿರ್ಮಲ ಸೀತಾರಾಮನ್ ರವರು ಮಾಹಿತಿಯನ್ನು ತಿಳಿಸಿರುತ್ತಾರೆ.
ಪಿ.ಎಂ. ಆವಾಸ್ ಯೋಜನೆಯ ಉದ್ದೇಶ:
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಹು ಮುಖ್ಯವಾದ ಉದ್ದೇಶವೇನೆಂದರೆ, ಬಡವರಿಗೆ ತಮ್ಮ ಸ್ವಂತ ಕನಸಿನ ಮನೆಯನ್ನು ನಿರ್ಮಾಣ ಮಾಡಿಕೊಡುವುದಾಗಿರುತ್ತದೆ. ಬಡವರಿಗೆ ಹಾಗೂ ಹಿಂದುಳಿದ ವರ್ಗಗಳಲ್ಲಿರುವಂತಹ ಜನರಿಗೆ ತಮ್ಮ ಸ್ವಂತ ಕನಸಿನ ಮನೆಯನ್ನು ಕಟ್ಟಿಕೊಳ್ಳುವುದು ಒಂದು ಬಹುದೊಡ್ಡ ಕನಸಾಗಿರುತ್ತದೆ ಅವರ ಆರ್ಥಿಕ ಸ್ಥಿತಿಗಳಿಗೆ ಅನುಗುಣವಾಗಿ ಸ್ವಂತ ಮಾನ್ಯ ನಿರ್ಮಿಸಿಕೊಳ್ಳುವುದು ಸ್ವಲ್ಪ ಕಷ್ಟಕರವಾದ ಕೆಲಸ ಆಗಿರ ಬಹುದು.
ಆದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಬಡವರಿಗೆ ಹಾಗೂ ಮನೆ ಇಲ್ಲದಿರುವಂತಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಮನೆಯನ್ನು ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಉಚಿತವಾಗಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುವುದು. ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆಯನ್ನು ಪಡೆದುಕೊಳ್ಳಬಹುದಾಗಿರುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಯೋಜನೆಯ ಅಧ್ಯಾಯದ ಅರ್ಹತೆಗಳು ಮತ್ತು ಮಾನದಂಡಗಳನ್ನು ನೀವು ಪೂರೈಸಿರಬೇಕಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳನ್ನು ಕೂಡ ನೀವು ಒದಗಿಸಬೇಕಾಗುತ್ತದೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಗುರಿ ಏನೆಂದರೆ ಮೂರು ಕೋಟಿ ಮನೆ ನಿರ್ಮಾಣ ಮಾಡುವುದಾಗಿರುತ್ತದೆ ಈ ಯೋಜನೆಯಡಿ ಮೂರು ಕೋಟಿಗಿಂತಲೂ ಹೆಚ್ಚು ಜನರು ಮನೆಯನ್ನು ಕಟ್ಟಿಸಿಕೊಳ್ಳುವ ಗುರಿಯನ್ನು ಹೊಂದಿರಲಾಗಿರುತ್ತದೆ.
ಪಿ.ಎಂ. ಆವಾಸ್ ಯೋಜನೆಯ ವಿಧಗಳು:
ಈ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿ ನೀವು ಎರಡು ವಿಧಗಳನ್ನು ಕಾಣಬಹುದಾಗಿದೆ ಮೊದಲನೆಯದು ಪ್ರಧಾನಮಂತ್ರಿ ಆವಾಸ ಯೋಜನೆ ನಗರ ಪಟ್ಟಿ ಮತ್ತು ಎರಡನೆಯದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ ಎಂದು ಹೇಳಬಹುದು ಈ ಎರಡು ಭಾಗಗಳಾಗಿ ಈ ಯೋಜನೆಯನ್ನು ವರ್ಗೀಕರಣ ಮಾಡಲಾಗಿರುತ್ತದೆ.
ನಗರ ಪಟ್ಟಿ ಎಂದರೆ ನಗರಗಳಲ್ಲಿ ವಾಸಿಸುತ್ತಿರುವ ಹಾಗೂ ಪಟ್ಟಣಗಳಲ್ಲಿ ವಾಸಿಸುತ್ತಿರುವ ಜನರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲಾಗಿರುತ್ತದೆ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗಗಳ ಕುಟುಂಬಗಳು ಹಾಗೂ ಆರ್ಥಿಕ ಸ್ಥಿತಿಯಲ್ಲಿ ಕೆಳಮಟ್ಟದಲ್ಲಿ ಇರುವಂತಹ ಅಭ್ಯರ್ಥಿಗಳಿಗೆ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ನೀಡಲಾಗುವ ಉದ್ದೇಶವನ್ನು ಹೊಂದಿರುತ್ತದೆ.
ಈ ನಗರ ಪಟ್ಟಿ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿ 2,36,000ಗಳವರೆಗೆ ಮನೆ ಕಟ್ಟಿಕೊಳ್ಳಲು ಆರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ಮತ್ತು ಈ ಯೋಜನೆಯ ಮೂಲಕ ಸುಮಾರು 10 ಲಕ್ಷಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವು ಕೂಡ ದೊರಕಿಸಿಕೊಡಲಾಗುತ್ತದೆ.
ಇನ್ನು ಗ್ರಾಮೀಣ ಪಟ್ಟಿಯನ್ನು ನೋಡುವುದಾದರೆ ಗ್ರಾಮೀಣ ಪ್ರದೇಶಗಳು ಅಂದರೆ ಹಳ್ಳಿಗಳಲ್ಲಿ ವಾಸ ಮಾಡುತ್ತಿರುವ ಜನರಿಗೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿರುವಂತಹ ಜನರಿಗೆ ಮತ್ತು ಇತರೆ ನದಿತೀರ ಹಾಗೂ ಇತರೆ ಹಳ್ಳಿ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಜನರಿಗೆ ರೈತರಿಗೆ ಮುಂತಾದವರಿಗೆ ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನವನ್ನು ಗ್ರಾಮೀಣ ಪಟ್ಟಿ ವಿಧಗಳಲ್ಲಿ ಸೇರಿಸಲಾಗುತ್ತದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಗ್ರಾಮೀಣ ಪಟ್ಟಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ರೂ. 1,50,000 ಇಂದ ಹಿಡಿದು ರೂ.1,75,000ಗಳ ವರೆಗೆ ಮನೆ ಕಟ್ಟಿಕೊಳ್ಳಲು ಆರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ಮನೆ ಕಟ್ಟಿಕೊಳ್ಳಲು ಇನ್ನಷ್ಟು ಹೆಚ್ಚಿನ ಸಾಲವನ್ನು ಪಡೆಯಬೇಕಾದರೆ ಪಡೆಯಬೇಕಾದರೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ 6 ಲಕ್ಷ ರೂಪಾಯಿಯಿಂದ ಹಿಡಿದು 10 ಲಕ್ಷ ರೂಪಾಯಿಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ಕೂಡ ಮಾಡಿಕೊಡಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಎಂದು ತಿಳಿಸಲಾಗಿದೆ.
- ಈ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ನೀವು ಫಲಾನುಭವಿ ಆಗಬೇಕೆಂದು ಬಯಸಿದರೆ ಅಥವಾ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ಭಾರತದ ಪ್ರಜೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಾರ್ಷಿಕ ಆದಾಯ 2,50,000 ಸಾವಿರದಿಂದ ಹಿಡಿದು 6 ಲಕ್ಷ ಒಳಗೆ ಇದ್ದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತೀರಾ.
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರು ಕಡ್ಡಾಯವಾಗಿ ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತೀರಾ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಪ್ರಧಾನ ಮಂತ್ರಿ ಆವಾಸ ಯೋಜನೆಯ ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದು ಬಯಸಿದರೆ ಕೆಳಗಡೆ ಕೊಟ್ಟಿರುವ ದಾಖಲಾತಿಗಳನ್ನು ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಒದಗಿಸಬೇಕಾಗುತ್ತದೆ.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಇತರೆ ದಾಖಲೆಗಳನ್ನು ಒದಗಿಸಬೇಕು
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ, ನೀವೇನಾದರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನಿಮ್ಮ ಮೊಬೈಲ್ ನಲ್ಲಿ ನೀವು ಅರ್ಜಿ ಸಲ್ಲಿಸಬಹುದು. ಆದರೆ ಅರ್ಜಿ ಸಲ್ಲಿಸಲು ದಾಖಲಾತಿಗಳನ್ನು ಅಪ್ಲೋಡ್ ಮಾಡುವ ಸಮಯದಲ್ಲಿ ತೊಂದರೆಗಳನ್ನು ಅನುಭವಿಸಬಹುದು ಆದ್ದರಿಂದ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವ ಜಾಲತಾಣವನ್ನು ಬಳಸಿಕೊಂಡು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನಿಮಗೆ ಯಾವುದೇ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ. ಇದೇ ರೀತಿಯ ಮಾಹಿತಿಗಳಿಗಾಗಿ ನಮ್ಮ ಜಾಲತಾಣದ ಚಂದಾದಾರರಾಗಿ ಹಾಗೂ ಈ ಸುದ್ದಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.