RRC Recruitment 2024: ನಮಸ್ಕಾರ ಎಲ್ಲರಿಗೂ, ಆರ್ ಆರ್ ಸಿ ಅಂದರೆ ಪೂರ್ವ ರೈಲ್ವೆ ಇಲಾಖೆಯು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸುಮಾರು 3,115 ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಯನ್ನು ಅಧಿಸೂಚನೆ ಹೊರಡಿಸಲಾಗಿರುತ್ತದೆ. ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ.
ರೈಲ್ವೆ ಇಲಾಖೆ ನೇಮಕಾತಿ:
ಸರ್ಕಾರಿ ಉದ್ಯೋಗ ಬೇಕೆಂದು ಬಯಸುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಸುಮಾರು 3,115 ಅಪ್ಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದ್ದು, ರೈಲ್ವೆ ಇಲಾಖೆಯಲ್ಲಿ ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅಕ್ಟೋಬರ್ 23ರ ಒಳಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಖಾಲಿ ಇರುವ ಹುದ್ದೆಗಳ ವಿವರ:
- ಹುದ್ದೆಗಳ ಸಂಖ್ಯೆ: 3,115 ಖಾಲಿ ಹುದ್ದೆಗಳು
- ಶೈಕ್ಷಣಿಕ ಅರ್ಹತೆ: SSLC ಮತ್ತು ITI
- ನೇಮಕಾತಿ ಪ್ರಾಧಿಕಾರ: ಆರ್.ಆರ್.ಸಿ. ಪೂರ್ವ ರೈಲ್ವೆ ಇಲಾಖೆ
- ಉದ್ಯೋಗ ಸ್ಥಳ: ಭಾರತ ದೇಶದಾದ್ಯಂತ
- ಹುದ್ದೆಯ ಹೆಸರು: ಅಪ್ರೆಂಟಿಸ್
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 24/09/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/10/2024
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿಯನ್ನು ಮುಗಿಸಿರಬೇಕು ಎಂದು ತಿಳಿಸಲಾಗಿರುತ್ತದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 15 ವರ್ಷ ಮೇಲ್ಪಟ್ಟಿರಬೇಕು ಹಾಗೂ 24 ವರ್ಷ ಒಳಗಿನವರಾಗಿರಬೇಕು ಎಂದು ತಿಳಿಸಲಾಗಿರುತ್ತದೆ. ಹಾಗೂ ವರ್ಗಗಳ ಆಧಾರದ ಮೇಲೆ ವಯೋಮಿತಿ ಸಡಲಿಕೆಯನ್ನು ನೀಡಲಾಗುತ್ತದೆ.
- ಇನ್ನಷ್ಟು ಹೆಚ್ಚಿನ ಅರ್ಹತಮಾನದಂಡಗಳನ್ನು ನೀವು ಅಧಿಸೂಚನೆಯಲ್ಲಿ ಕಾಣಬಹುದಾಗಿರುತ್ತದೆ.
ಅರ್ಜಿ ಶುಲ್ಕ:
ನೀವೇನಾದರೂ ಪೂರ್ವ ರೈಲ್ವೆ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹100 ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ನೇಮಕಾತಿ ವಿಧಾನ:
ಪೂರ್ವ ರೈಲ್ವೆ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಯನ್ನು 10ನೇ ತರಗತಿ ಅಥವಾ ಐಟಿಐ ಹಾಗೂ ಮೆಟ್ರಿಕುಲೇಷನ್ ಆಧಾರಗಳ ಮೇಲೆ ಗಣನೆಗೆ ತೆಗೆದುಕೊಂಡು ಮೆರಿಟ್ ಆಧಾರದ ಮೇಲೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಪೂರ್ವ ರೈಲ್ವೆ ಇಲಾಖೆ ಹೊರಡಿಸಿರುವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅಥವಾ ನಿಮಗೆ ಯಾವುದೇ ರೀತಿಯ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವ ಜಾಲತಾಣವನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ನಿಮಗೆ ತಿಳಿಯದಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ನೀವು ಬೇಕಾಗುವ ದಾಖಲೆಗಳನ್ನು ಒದಗಿಸುವ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.