SSC GD Recruitment: ನಮಸ್ಕಾರ ಎಲ್ಲರಿಗೂ, ನೀವೇನಾದರೂ 10ನೇ ತರಗತಿ ಪಾಸ್ ಆಗಿದ್ದೀರಾ ಹಾಗೂ ಒಂದು ಉತ್ತಮ ಉದ್ಯೋಗಕ್ಕಾಗಿ ಹುಡುಕುತ್ತಿದ್ದೀರಾ? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಆದ ಕಾರಣ ಆಸಕ್ತಿ ಮತ್ತು ಅರ್ಹತೆಯುಳ್ಳಂತಹ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ.
10ನೇ ತರಗತಿ ಪಾಸಾದ ಅಂತಹ ಅಭ್ಯರ್ಥಿಗಳಿಗೆ ಸುಮಾರು 39 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/10/2024
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 15/10/2024
- ಅಪ್ಲಿಕೇಶನ್ ತಿದ್ದುಪಡಿಯ ಕೊನೆ ದಿನಾಂಕ: 05/11/2024
- ಪರೀಕ್ಷ ಸಂಭಾವ್ಯ ದಿನಾಂಕ: ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ (2025)
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿಯನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅಥವಾ ತತ್ಸಮಾನ ವಿದ್ಯಾಭ್ಯಾಸದಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿ:
ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ಗರಿಷ್ಠ 23 ವರ್ಷಗಳನ್ನು ಮೀರಿರಬಾರದು ಎಂದು ತಿಳಿಸಲಾಗಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಲಿಕೆ ಹಾಗೂ SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಲಿಕೆ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡದಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ, ಅಂದರೆ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 100 ರೂಪಾಯಿಯ ಅರ್ಜಿ ಶುಲ್ಕವನ್ನು ವಿಧಿಸಲಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- 371 ಜೆ ಪ್ರಮಾಣ ಪತ್ರ (ಇದ್ದಲ್ಲಿ ಮಾತ್ರ ಬೇಕಾಗುತ್ತದೆ)
ಅರ್ಜಿ ಸಲ್ಲಿಸುವುದು ಹೇಗೆ:
ಸ್ನೇಹಿತರೆ, ನೀವೇನಾದರೂ ಈ ಹುದ್ದೆಗಳಿಗೆ (SSC GD Recruitment) ಅರ್ಜಿ ಸಲ್ಲಿಸಲು ಬಯಸಿದರೆ, ಕೆಳಗಡೆ ಕೊಟ್ಟಿರುವ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ನಿಮಗೆ ಯಾವುದೇ ರೀತಿಯ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಕೇಂದ್ರಕ್ಕೆ ಭೇಟಿ ನೀಡಿ ಸುಲಭವಾಗಿ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಮೇಲೆ ಕೊಟ್ಟಿರುವಂತಹ ಜಾಲತಾಣವನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅಧಿಸೂಚನೆಯನ್ನು ಕೂಡ ನೀವು ವೀಕ್ಷಿಸಬಹುದಾಗಿರುತ್ತದೆ. ಈ ಲೇಖನದ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.