SSLC Prize Money: ನಮಸ್ಕಾರ ಎಲ್ಲರಿಗೂ, 10ನೇ ತರಗತಿಯನ್ನು ಪಾಸಾಗಿರುವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನೀಡುವ ಈ ವಿದ್ಯಾರ್ಥಿ ವೇತನವು 10ನೇ ತರಗತಿಯ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಅಂದರೆ SC ಮತ್ತು ST ವರ್ಗದ ವಿದ್ಯಾರ್ಥಿಗಳಿಗೆ ರೂ. 7,000 ದಿಂದ 15,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಧನವೆಂದು ಈ ವಿದ್ಯಾರ್ಥಿ ವೇತನವನ್ನು ಕರೆಯಲಾಗುತ್ತದೆ.
ನೀವೇನಾದರೂ 1೦ನೇ ತರಗತಿ ಪಾಸ್ ಆಗಿದ್ದೀರಾ? ಅಥವಾ ನಿಮ್ಮ ಮನೆಯಲ್ಲಿ ಯಾರಾದರೂ 10ನೇ ತರಗತಿಯನ್ನು ಇತ್ತೀಚಿಗೆ ಉತ್ತೀರ್ಣರಾಗಿ ಸ್‌ಸಿ ಮತ್ತು ಎಸ್ ಟಿ ವರ್ಗದ ವಿದ್ಯಾರ್ಥಿಗಳಾಗಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇದನ್ನು “ಪ್ರೈಜ್ ಮನಿ” ಸ್ಕಾಲರ್ಶಿಪ್ ಎಂದು ಕೂಡ ಕರೆಯಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ಇನ್ನಿತರ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿರುತ್ತದೆ ನೋಡಿ.
ಪ್ರೈಜ್ (Prize Money) ಮನಿ ಸ್ಕಾಲರ್ಶಿಪ್ ವಿವರಗಳು:
ವಿದ್ಯಾರ್ಥಿವೇತನದ ಹೆಸರು | SSLC ಪ್ರೋತ್ಸಾಹಧನ |
ಯಾರು ಅರ್ಜಿ ಸಲ್ಲಿಸಬಹುದು | SC/ST ವಿದ್ಯಾರ್ಥಿಗಳಿಗೆ ಮಾತ್ರ. |
ಶೈಕ್ಷಣಿಕ ವರ್ಷ | 2023-2024 |
ಅರ್ಜಿ ಸಲ್ಲಿಕೆ ಪ್ರಾರಂಭ | ಈಗಲೇ ಅರ್ಜಿ ಸಲ್ಲಿಸಬಹುದು |
ಅರ್ಜಿ ಸಲ್ಲಿಕೆ ಮುಕ್ತಾಯ | ಇನ್ನೂ ತಿಳಿಸಲಾಗಿಲ್ಲ |
ವಿದ್ಯಾರ್ಥಿ ವೇತನದ ಮೊತ್ತ | ₹7,000 ದಿಂದ ₹15,000 |
ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು:
- SC ಮತ್ತು ST ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು ಎಂದು ತಿಳಿಸಲಾಗಿದೆ.
- ವಾರ್ಷಿಕ ಪರೀಕ್ಷೆಯಲ್ಲಿ 60% ಕನಿಷ್ಠ ಅಂಕಗಳನ್ನು ಗಳಿಸಿರಬೇಕು ಎಂದು ತಿಳಿಸಲಾಗಿದೆ.
- 10ನೇ ತರಗತಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.
ಪ್ರೋತ್ಸಾಹಧನದ ಮೊತ್ತ:
- 60% ನಿಂದ 74.99% ಅಂಕ ಪಡೆದ ವಿದ್ಯಾರ್ಥಿಗಳಿಗೆ – ₹7,000/-
- 75% ಗಿಂತ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ: ₹15,000/-
ಪ್ರೋತ್ಸಾಹಧನಕ್ಕೆ ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರಗಳು
- ಪಾಸ್ಪೋರ್ಟ್ ಅಳ್ತೆಯ ಭಾವಚಿತ್ರ
- 10ನೇ ತರಗತಿ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ವಿಶೇಷ ಸೂಚನೆ: ವಿದ್ಯಾರ್ಥಿಯ ಆಧಾರ್ ಕಾರ್ಡ್ ತನ್ನ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
10ನೇ ತರಗತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗಡೇ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Application Link | Apply Now |
ಮೇಲೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಪ್ರೈಸ್ ಮನಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ ನಿಮಗೆ ಅರ್ಜಿ ಸಲ್ಲಿಸಲು ತಿಳಿಯದಿದ್ದಲ್ಲಿ ಅಥವಾ ಗೊಂದಲವಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.