SSP Scholarship: ನಮಸ್ಕಾರ ಎಲ್ಲರಿಗೂ, ರಾಜ್ಯ ಸರ್ಕಾರದ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಭ್ಯವಿರುವ ಪೋಸ್ಟ್ ಮೆಟ್ರಿಕ್ ಅಂದರೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿರುತ್ತದೆ. ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣವಾದ ವಿಧಾನವನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ ನೋಡಿ.
ರಾಜ್ಯದಲ್ಲಿರುವ ವಿದ್ಯಾರ್ಥಿಗಳು ತಮ್ಮ ಉನ್ನತವಾದ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿ ವೇತನವನ್ನು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಸಕ್ತಿ ತೋರಿಸಬಹುದು. ಸಂಪೂರ್ಣವಾದ ವಿವರವನ್ನು ಈ ಲೇಖನದಲ್ಲಿ ನೀಡಲಾಗುವುದು. ಅವಶ್ಯಕತೆ ಇದ್ದಲ್ಲಿ ಲೇಖನವನ್ನು ಪೂರ್ತಿಯಾಗಿ ಓದಿರಿ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ:
ಹೌದು ವಿದ್ಯಾರ್ಥಿಗಳೇ, ಮೆಟ್ರಿಕ್ ನಂತರದ ಕೋರ್ಸ್ ಗಳಾಗಿರುವ ಪಿಯುಸಿ ಡಿಗ್ರಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಆನ್ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿರುತ್ತದೆ.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜು ರಿಜಿಸ್ಟರ್ ನಂಬರ್
- ಹಾಸ್ಟೆಲ್ ವಿವರಗಳು
- ವಿಳಾಸ ಪ್ರಮಾಣ ಪತ್ರ
- ಇಮೇಲ್ ಐಡಿ
- 10ನೇ ತರಗತಿ ರಿಜಿಸ್ಟರ್ ನಂಬರ್
ಮೇಲಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಕರ್ನಾಟಕದ ನಿವಾಸಿ ಆಗಿರಬೇಕು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿ ವೇತನ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಅರ್ಹತಾ ಅವಶ್ಯಕತೆಗಳನ್ನು ಪೂರೈಸಿರಬೇಕು ಎಂದು ತಿಳಿಸಲಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರಬೇಕು ಯಾಕೆಂದರೆ ಈ ವಿದ್ಯಾರ್ಥಿ ವೇತನವು ನೇರ ಲಾಭ ವರ್ಗಾವಣೆಯಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿದ್ದರೆ ಹಾಗೂ ಬೇಕಾಗುವ ದಾಖಲೆಗಳು ಎಲ್ಲಾ ನಿಮ್ಮ ಹತ್ತಿರವಿದ್ದರೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.