U-Go Scholarship: ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ₹60,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

U-Go Scholarship: ನಮಸ್ಕಾರ ವಿದ್ಯಾರ್ಥಿಗಳೇ, ಈ ಲೇಖನದ ಮೂಲಕ ತಮಗೆ ತಿಳಿಸುವುದೇನೆಂದರೆ, ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಮುಂದಿನ ಕೋಸುಗಳಿಗೆ ಅಧ್ಯಯನ ಮಾಡಲು “ಯು ಗೋ” ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 60,000 ಸ್ಕಾಲರ್ಶಿಪ್ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಇಲ್ಲಿವೆ ನೋಡಿ.

“ಯು ಗೋ” ವಿದ್ಯಾರ್ಥಿ ವೇತನ:

ನಿಮಗೆಲ್ಲ ಗೊತ್ತಿರುವ ಹಾಗೆ ಯು ಗೋ ಸಂಸ್ಥೆಯು ಇಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ವೃತ್ತಿಪರ ಪದವಿ ಕೋರ್ಸ್ ಗಳಿಗೆ ಅಧ್ಯಯನ ಮಾಡುತ್ತಿರುವಂತಹ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಉನ್ನತವಾಗಿ ಮುಂದುವರಿಸಲು ಹಾಗೂ ಉನ್ನತ ಶಿಕ್ಷಣವನ್ನು ಪಡೆಯುವ ಉದ್ದೇಶದಿಂದ ಈ ಸಂಸ್ಥೆಯು ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಆಸಕ್ತರು ಈ ಸ್ಕಾಲರ್ಶಿಪ್ ನಲ್ಲಿ ಲಾಭವನ್ನು ಪಡೆದುಕೊಳ್ಳಬಹುದು. 

ಸ್ಕಾಲರ್ಶಿಪ್ ಗೆ ಅರ್ಹತೆಗಳು: 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಮೊದಲ ವರ್ಷದ ಅಧ್ಯಯನ ಮಾಡುತ್ತಿರಬೇಕು ಎಂದು ತಿಳಿಸಲಾಗಿದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು SSLC ಮತ್ತು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 70% ಅಂಕಗಳನ್ನು ಪಡೆದಿರಬೇಕು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ಒಳಗಡೆ ಇರಬೇಕು ಎಂದು ತಿಳಿಸಲಾಗಿದೆ. 

ಈ ವಿದ್ಯಾರ್ಥಿ ವೇತನಕ್ಕೆ ಮಹಿಳಾ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲಾಗಿರುತ್ತದೆ. 

ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲೆಗಳು: 

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಆದಾಯ ಪ್ರಮಾಣ ಪತ್ರ 
  • ಜಾತಿ ಪ್ರಮಾಣ ಪತ್ರ 
  • ಮೊಬೈಲ್ ನಂಬರ್ 
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 
  • ಬ್ಯಾಂಕ್ ಪಾಸ್ ಬುಕ್ 
  • SSLC ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್ 
  • ಇನ್ನಿತರ ದಾಖಲೆಗಳು 

ಅರ್ಜಿ ಸಲ್ಲಿಸುವುದು ಹೇಗೆ.?

ನೀವೇನಾದರೂ ಮೇಲೆ ನೀಡಿರುವ ಅರ್ಹತೆಗಳನ್ನು ಹೊಂದಿದ್ದರೆ ನೀವು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಸೆಪ್ಟೆಂಬರ್ 30ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಮೇಲೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಮೇಲೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

WhatsApp Group Join Now
Telegram Group Join Now

ಈ ನಮ್ಮ ಮಾಧ್ಯಮದ ಮೂಲಕ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳು, ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

Leave a Comment

error: Content is protected by RAJ !!