Vidyanidhi: ನಮಸ್ಕಾರ ಎಲ್ಲರಿಗೂ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಯಾವ ರೀತಿ ಹಣವನ್ನು ಪಡೆದುಕೊಳ್ಳಬೇಕು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು? ಮತ್ತು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಿದ್ದೇವೆ.
ವಿದ್ಯಾನಿಧಿ ವಿದ್ಯಾರ್ಥಿ ವೇತನ!
ನಿಮಗೆಲ್ಲ ಗೊತ್ತಿರುವ ಹಾಗೆ ಪಿಯುಸಿ ಇಂದ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 3000 ದಿಂದ 10,000 ಗಳವರೆಗಿನ ವಿದ್ಯಾರ್ಥಿ ವೇತನವನ್ನು ತಮ್ಮದಾಗಿಸಿಕೊಳ್ಳಬಹುದಾಗಿರುತ್ತದೆ.
ವಿದ್ಯಾರ್ಥಿ ವೇತನದ ಮೊತ್ತ:
ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನದ ಯೋಜನೆ ಅಡಿ 2500 ರೂಪಾಯಿಗಳನ್ನು ನೀಡಲಾಗುತ್ತದೆ.
ಪದವಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 5000 ರಿಂದ 5500 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ಈ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಟೋ ಚಾಲಕರು ಹಾಗೂ ಟ್ಯಾಕ್ಸಿ ಡ್ರೈವರ್ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಪಿಯುಸಿ, ಐಟಿಐ, ಪದವಿ ಹಾಗೂ ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿರುವ ಅಧಿಕೃತ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Application Link | Apply Now |
ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ನೀವು ಈ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.